ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲೂ ಹೆಚ್ಚುತ್ತಿರುವ ಕೊರೊನಾ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಇನ್ನಷ್ಟು ದಿನಗಳಕಾಲ ಲಾಕ್ ಡೌನ್ ವಿಸ್ತರಣೆಗೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಈಗಿರುವ ಲಾಕ್ ಡೌನ್ ಜೂನ್ 7ರ ಬಳಿಕವೂ ವಿಸ್ತರಣೆ ಮಾಡುವುದು ಉತ್ತಮ ಎಂದು ಸರ್ಕಾರಕ್ಕೆ ತಜ್ಞರು ಹಾಗೂ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಪ್ರಸ್ತುತ ಲಾಕ್ ಡೌನ್ ಜಾರಿಯಿಂದಲೇ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ತಕ್ಷಣ ಲಾಕ್ ಡೌನ್ ತೆರವು ಮಾಡಿದರೆ ಮತ್ತೆ ಸೋಂಕು ಹೆಚ್ಚಾಗಲಿದೆ. ಅಲ್ಲದೇ ಜಿಲ್ಲೆಗಳಲ್ಲಿಯೂ ಸೋಂಕು ನಿಯಂತ್ರಣಕ್ಕೆ ಬರಬೇಕು ಹಾಗೂ ಆಸ್ಪತ್ರೆಗಳ ಮೇಲಿನ ಒತ್ತಡ, ಸಾವಿನ ಸಂಖ್ಯೆ ಕಡಿಮೆಯಾಗಬೇಕು ಈ ನಿಟ್ಟಿನಲ್ಲಿ ಲಾಕ್ ಡೌನ್ ವಿಸ್ತರಿಸಬೇಕು ಎಂದಿದ್ದಾರೆ.
ಒಟ್ಟಾರೆ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಲಾಕ್ ಡೌನ್ ವಿಸ್ತರಣೆಯಾಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.
ಅನುದಾನ ರಹಿತ ಶಾಲೆಗಳ ಶಿಕ್ಷಕರ ನೆರವಿಗೆ ಮನವಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ