ಪ್ರಗತಿವಾಹಿನಿ ಸುದ್ದಿ; ಬೆಂಗಳೂರು/ ಬೆಳಗಾವಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿದ್ದು, ಇಂದಿನಿಂದಲೇ ಕಠಿಣ ರೂಲ್ಸ್ ಗಳು ಜಾರಿಗೆ ಬಂದಿವೆ. ಕಟ್ಟುನಿಟ್ಟಿನ ಲಾಕ್ ಡೌನ್ ಗೆ ಸಿಎಂ ಯಡಿಯೂರಪ್ಪ ಸೂಚಿಸಿದ ಬೆನ್ನಲ್ಲೇ ಫೀಲ್ಡಿಗಿಳಿದ ಪೊಲೀಸರು ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ.
ಬೆಳಗಾವಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದಲೇ ಸಂಪೂರ್ಣ ಲಾಕ್ ಡೌನ್ ಜಾರಿಯಾಗಿದ್ದು, ಹಾಲು, ಔಷಧ ಹೊರತುಪಡಿಸಿ ಬೇರೆ ಯಾವುದಕ್ಕೂ ಅವಕಾಸ ನೀಡಲಾಗಿಲ್ಲ. ಆಸ್ಪತ್ರೆಗೆ ತೆರಳುವವರು ಮಾತ್ರ ರಸ್ತೆಗೆ ಇಳಿಯಲು ಅವಕಾಶ ಕಲ್ಪಿಸಲಾಗಿದೆ.
ಇನ್ನು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಉಳಿದೆಡೆ ಪೊಲಿಸರು ಅನಗತ್ಯವಾಹನ ಓಡಾಟನಡೆಸುವವರ ಮೇಲೆ ನಿಗಾ ಇಟ್ಟಿದ್ದು, 10 ಗಂಟೆ ಬಳಿಕ ರಸ್ತೆಗಿಳಿದ ವಾಹನಗಳನ್ನು ಸೀಜ್ ಮಾಡಿ, ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಲಾಕ್ ಡೌನ್ ನಿಯಮ ಉಲ್ಲಂಘಿಸಿದರೆ ಅಂತವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಸೂಚನೆ ನೀಡಿದ್ದು, ಇದರ ಬೆನ್ನಲ್ಲೇ ನಗರದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೂಡ ಅನಗತ್ಯವಾಗಿ ಓಡಾಟ ನಡೆಸುತ್ತಿರುವವರನ್ನ ಪೊಲೀಸರು ವಶಕ್ಕೆ ಪಡೆದಿದ್ದು, ವಾಹನಗಳನ್ನು ಜಪ್ತಿ ಮಾಡುತ್ತಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಕಠಿಣ ಲಾಕ್ ಡೌನ್ ನಿಯಮ ಇಂದಿನಿಂದಲೇ ಜಾರಿಗೆ ಬಂದಿದೆ.
ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಹಿರಿಯ ಅಧಿಕಾರಿಗಳೇ ಕಾರ್ಯಾಚರಣೆಗಿಳಿದಿದ್ದಾರೆ. ಅಲ್ಲಲ್ಲಿ ನಿಂತು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಅನಗತ್ಯ ಓಡಾಟ ಎಂದು ಕಂಡು ಬಂದಲ್ಲಿ ಕೂಡಲೇ ವಾಹನ ಸೀಜ್ ಮಾಡುತ್ತಿದ್ದಾರೆ.
ಇಂದು ಮತ್ತು ನಾಳೆಯೂ ಇದೇ ರೀತಿ ಮುಂದುವರಿಯಲಿದೆ. ಸೋಮವಾರ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ.
ಬೆಳಗಾವಿಯಲ್ಲಿ 3 ದಿನ ಸಂಪೂರ್ಣ ಲಾಕ್ ಡೌನ್; ಹೊಸ ಆದೇಶ
ರಾಜ್ಯದಲ್ಲಿ ಲಾಕ್ ಡೌನ್ ಇನ್ನೂ 14 ದಿನ ವಿಸ್ತರಣೆ – ಸಿಎಂ ಘೋಷಣೆ (ವಿಡಿಯೋ ಸಹಿತ ವರದಿ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ