ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಲಾಕ್ ಡೌನ್ ಇನ್ನಷ್ಟು ಬಿಗಿಯಾಗಿದ್ದು, 14 ದಿನಗಳ ಕಠಿಣ ಲಾಕ್ ಡೌನ್ ಆರಂಭವಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪೊಲೀಸರಿಗೆ ಫುಲ್ ಪವರ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆ ಜಿಲ್ಲೆಗಳಲ್ಲಿ 3-4 ದಿನಗಳ ಸಂಪೂರ್ಣ ಲಾಕ್ ಡೌನ್ ಜಾರಿಗೆ ತರಲಾಗಿದೆ. ಅಂತಹ ಜಿಲ್ಲೆಗಳಲ್ಲಿ ಈಗಗಾಲೇ ಅನಗತ್ಯ ಓಡಾಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿದೆ. ಉಳಿದ ಜಿಲ್ಲೆಗಳಲ್ಲೂ ರಸ್ತೆ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಲು ಸೂಚಿಸಲಾಗಿದೆ. ವಾಹನಗಳಲ್ಲಿ ಬೇಕಾಬಿಟ್ಟಿಯಾಗಿ ಓಡಾಡುತ್ತಿರುವವರನ್ನು ವಶಕ್ಕೆ ಪಡೆದು, ವಾಹನ ಜಪ್ತಿ ಮಾಡಲು ಖಡಕ್ ಸೂಚನೆ ನಿಡಲಾಗಿದೆ ಎಂದರು.
ಒಟ್ಟಾರೆ ರಾಜ್ಯಾದ್ಯಂತ ಇಂದಿನಿಂದ ಲಾಕ್ ಡೌನ್ ಜೂನ್ 7ರವರೆಗೆ ವಿಸ್ತರಣೆಯಾಗಿದ್ದು, ಅನಗತ್ಯವಾಗಿ ಮನೆಯಿಂದ ಹೊರಬಂದು ಓಡಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.
ದೀರ್ಘಕಾಲ ಒಂದೇ ಮಾಸ್ಕ್ ಬಳಸುತ್ತಿದ್ದರೆ ಇರಲಿ ಎಚ್ಚರ..!
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ