ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಇನ್ನೂ 15 ದಿನಗಳ ಕಾಲ ಲಾಕ್‍ಡೌನ್ ಮುಂದುವರಿಸಲಾಗಿದೆ. ಆದರೆ ಆರ್ಥಿಕತೆಗೆ ಕೊಂಚ ಚೇತರಿಕೆ ನೀಡುವ ನಿಟ್ಟಿನಲ್ಲಿ ಹಾಗೂ ಮೀನುಗಾರಿಕೆಯನ್ನೇ ನಂಬಿರುವ ಕರಾವಳಿ ಭಾಗದ ಜನ ಜೀವನ ಸುಧಾರಿಸಲು ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ.

ಈ ಹಿನ್ನಲೆಯಲ್ಲಿ ಇಂದಿನಿಂದ ನಾಡದೋಣಿ, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ನೀಡಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೀನುಗಾರಿಕೆ ಆರಂಭವಾಗಿದೆ. ಜನಸಂದಣಿ ಇಲ್ಲದ ಪ್ರದೇಶದಲ್ಲಿ ಮೀನು ಇಳಿಸಲು ವ್ಯವಸ್ಥೆ ಮಾಡಲಾಗಿದೆ. ಮಾರುಕಟ್ಟೆಗೆ ಸಾಗಿಸದೆ ಮೀನುಗಾರ ಮಹಿಳೆಯರ ಮೂಲಕ ಮನೆ ಬಾಗಿಲಿಗೆ ಮೀನು ತಲುಪಿಸುವ ವ್ಯವಸ್ಥೆ ಕಲ್ಪಿಸಲಾಗಿದೆ.

ಬಂದರು ಹಾಗೂ ಧಕ್ಕೆಗಳಲ್ಲಿ ಮೀನು ಇಳಿಸುವುದಕ್ಕೆ ನಿಷೇಧ ಹೇರಲಾಗಿದ್ದು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸುಮಾರು 14 ಸಾವಿರ ನಾಡದೋಣಿ, ಸಾಂಪ್ರದಾಯಿಕ ದೋಣಿಗಳಿವೆ. ಸಾಮಾಜಿಕ ಅಂತರ ಕಾಯ್ದುಕೊಂಡು ಮೀನು ಮಾರಾಟ ಮಾಡುವಂತೆ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ ನೀಡಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button