
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಇಂದಿನಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿದ್ದು, ಅನಗತ್ಯವಾಗಿ ಓಡಾಡುತ್ತಾ, ರಸ್ತೆಗಳಿಗೆ ವಾಹನಗಳನ್ನು ಇಳಿಸಿದರೆ ಅಂತವರ ವಿರುದ್ಧ ಕೇಸ್ ದಾಖಲಿಸಿ, ವಾಹನ ಸೀಜ್ ಮಾಡುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಇಂದಿನಿಂದ ಕರ್ನಾಟಕ ಸಂಪೂರ್ಣ್ ಲಾಕ್ ಆಗಲಿದೆ.
ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಸಮಯ ನಿಗದಿ ಮಾಡಲಾಗಿದ್ದು, 1೦ಗಂಟೆ ಬಳಿಕ ಮನೆಯಿಂದ ಯಾರೊಬ್ಬರೂ ಹೊರಬರುವಂತಿಲ್ಲ. ಕಟ್ಟುನಿಟ್ಟಾಗಿ ಲಾಕ್ ಡೌನ್ ಮಾರ್ಗಸೂಚಿ ಪಾಲಿಸಲು ಸೂಚಿಸಲಾಗಿದೆ.
ತುರ್ತು ಮೆಡಿಕಲ್ ಸೇವೆ ಹೊರತುಪಡಿಸಿ ಇನ್ನಾವುದೇ ಕಾರಣಕ್ಕೂ ವಾಹನಗಳಲ್ಲಿ ಓಡಾಟ ನಡೆಸುವಂತಿಲ್ಲ. ಒಂದು ವೇಳೆ ಅನಗತ್ಯವಾಗಿ ಓಡಾಟ ನಡೆಸಿದರೆ ಅಂತವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಒಟ್ಟಾರೆ ಇಂದಿನಿಂದ ರಾಜ್ಯದಲ್ಲಿ ಆರಂಭವಾಗಲಿರುವ ಲಾಕ್ ಡೌನ್ ಮೇ 24ರವರೆಗೂ ಇರಲಿದ್ದು, ಎಷ್ಟರಮಟ್ಟಿಗೆ ಪಾಲನೆಯಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.
ರಾಜ್ಯದಲ್ಲಿ ಕೋವಿಡ್ ಸಾವಿನ ಪ್ರಮಾಣ ಶೇ.1.02