ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟಕ್ಕೀಡಾಗಿ ಉಪನ್ಯಾಸಕರಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಾದ ಸುರೇಶ್ (29), ವಾಣಿಜ್ಯ ವಿಭಾಗದ ಉಪನ್ಯಾಸಕಿ ಕೋಕಿಲ (35) ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಒಂದೇ ಕಾಲೇಜಿನ ಉಪನ್ಯಾಸಕರಾಗಿದ್ದಾರೆ.
ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ. ಮೇ 11ರಂದು ಕೋಕಿಲ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನೂ ಜೂನ್ 4 ರಂದು ಸುರೇಶ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿದ್ದಾರೆ.
ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೀಡಾಗಿ ಇಬ್ಬರು ಉಪನ್ಯಾಸಕರು ಖಿನ್ನತೆಗೆ ಒಳಗಾಗಿದ್ದರು. ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆಪ್ತ ವಲಯದಿಂದ ತಿಳಿದುಬಂದಿದೆ. ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ