Kannada NewsKarnataka NewsLatest

ಮಹಾಕುಂಭ ಮೇಳಕ್ಕೆ ಹುಕ್ಕೇರಿ ಶ್ರೀಗಳಿಗೆ ಆಹ್ವಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಂಬಿಗರ ಹಳ್ಳಿ ಸಂಗಾಪುರದಲ್ಲಿರುವ ಕಾವೇರಿ, ಹೇಮಾವತಿ ಹಾಗೂ ಲಕ್ಷ್ಮಣ ತೀರ್ಥ ನದಿಗಳ ಸಂಗಮ ಸ್ಥಳದಲ್ಲಿ ಅ.13 ರಿಂದ ಅ.16ರವರೆಗೆ ಮಲೇಮಹಾದೇಶ್ವರ ಮಹಾಕುಂಭ ಮೇಳ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರನ್ನು ರಾಜ್ಯ ಸರಕಾರದ ವತಿಯಿಂದ ಸಚಿವ ನಾರಾಯಣಗೌಡ ಅವರು ಆಹ್ವಾನಿಸಿದ್ದಾರೆ.

ಕುಂಭ ಮೇಳಕ್ಕೆ ಸುಮಾರು 5 ರಿಂದ 6 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಸಚಿವ ನಾರಾಯಣಗೌಡ ಅವರು, ಎಲ್ಲರಿಗೂ ಇದರ ಸದುಪಯೋಗವಾಗಲಿ ಎಂದು ನೂರು ಬಸ್ ಗಳನ್ನು ಒದಗಿಸಲಾಗಿದೆ ಎಂದರು.

ಉತ್ತರ ಕರ್ನಾಟಕದ ಪ್ರಭಾವಿ ಸ್ವಾಮೀಜಿಯಾಗಿರುವ ಗಡಿಭಾಗದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿರುವ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರನ್ನು ಆಹ್ವಾನಿಸುತ್ತಿರುವುದು ನಮಗೆ ಅತೀವ ಸಂತೋಷ ತಂದಿದೆ. ಸುತ್ತೂರು ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀರಂಗಪಟ್ಟಣದ ಬೇಬಿಮಠದ ಡಾ. ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಆದಿಚುಂಚನಗಿರಿಯ ನಿರ್ಮಲಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಜರುಗುವ ಈ ಕುಂಭ ಮೇಳದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ, ಪ್ರಯಾಗ ವಾರಣಾಸಿಯಲ್ಲಿ ಅದ್ಭುತ ಕ್ರಾಂತಿ ಮಾಡಿದ ಯೋಗಿ ಆದಿತ್ಯನಾಥ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ, ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ. ನಾಲ್ಕು ದಿನಗಳ ವರೆಗೆ ವಿಶೇಷ ಗಂಗಾರತಿಯು ಜರುಗಲಿದೆ.

ಆಮಂತ್ರಣ ಸ್ವೀಕರಿಸಿದ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮೊದಲು ಕುಂಭ ಮೇಳಕ್ಕೆ ಉತ್ತರ ಪ್ರದೇಶದಲ್ಲಿ ಹೋಗಿ ಪಾಲ್ಗೊಳ್ಳುತ್ತಿದ್ದೆವು. ಇವತ್ತು ಅಂಬಿಗರ ಹಳ್ಳಿಯಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸುತ್ತಿರುವುದು ಸಂತಸ ತಂದಿದೆ. ಇಂಥ ಕುಂಭ ಮೇಳಗಳು ಉತ್ತರ ಕರ್ನಾಟಕದಲ್ಲಿಯೂ ಜರುಗಬೇಕೆಂದು ಆಶಾಭಾವ ವ್ಯಕ್ತಪಡಿಸಿದರು.

Home add -Advt

ಬೈಕ್ ಸಹಿತ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಯುವಕ ಅದೃಷ್ಟವಶಾತ್ ಪಾರು; ಬೈಕ್ ನೀರುಪಾಲು

Related Articles

Back to top button