ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದ್ದ ಪ್ರತಿ ಭಾನುವಾರದ ಕರ್ಫ್ಯೂ ವನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ನಾಳೆ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಇರುವುದಿಲ್ಲ.
ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಬಿ ಎಸ್ ಯಡಿಯೂರಪ್ಪ, ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ಭಾನುವಾರ ದಿನಾಂಕ 31.05.2020ರಂದು ಕಂಪ್ಲೀಟ್ ಲಾಕ್‌ಡೌನ್ ಇರುವುದಿಲ್ಲ. ಆದ್ದರಿಂದ ಎಲ್ಲಾ ದೈನಂದಿನ ಚಟುವಟಿಕೆಗಳು ಎಂದಿನಂತೆ ಇರುತ್ತವೆ ಎಂದಿದ್ದಾರೆ.
ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಾದ ಬೆನ್ನಲ್ಲೇ ಪ್ರತಿಭಾನುವಾರ ಕಂಪ್ಲೀಟ್ ಲಾಕ್ ಡೌನ್ ಘೋಷಿಸಲಾಗಿತ್ತು. ಈ ಹಿನ್ನಲೆಯಲ್ಲಿ ಕಳೆದ ಭಾನುವಾರ ಕರ್ಫ್ಯೂ ಇತ್ತು. ಆದರೆ ಈಗ ಭಾನುವಾರದ ಕರ್ಫ್ಯೂ ತೆರವುಗೊಳಿಸಲಾಗಿದೆ. ಭಾನುವಾರ ರಜಾ ದಿನವಾದ ಕಾರಣ ಜನರ ಓಡಾಟ ಹೆಚ್ಚಾಗಿ ಕೊರೊನಾ ಸೋಂಕು ಹರಡುವ ಸಾಧ್ಯತೆ ದಟ್ಟವಾಗಿದೆ ಎಂಬ ಕಾರಣಕ್ಕೆ ಭಾನುವಾರ ಕಂಪ್ಲೀಟ್ ಲಾಕ್‌ಡೌನ್ ಹೇರುವ ನಿರ್ಧಾರ ಕೈಗೊಳ್ಳಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ