ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತೆ ಭಾನುವಾರ ಲಾಕ್ ಡೌನ್ ಜಾರಿಗೆ ಮುಂದಾಗಿದೆ. ಜುಲೈ 5 ರಿಂದ ಆಗಸ್ಟ್ 2ರವರೆಗೆ ಪ್ರತಿ ಭಾನುವಾರ ಲಾಕ್‍ಡೌನ್ ಮಾಡಲಾಗುವುದು ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ನಾಳೆಯಿಂದ ರಾಜ್ಯದ್ಯಾಂತ ರಾತ್ರಿ 8 ರಿಂದ ಬೆಳಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ವ್ಯಕ್ತಿಗಳ ಚಲನೆಯನ್ನು ನಿಷೇಧಿಸಿದೆ. ಸರ್ಕಾರಿ ನೌಕರರಿಗೆ 2020 ಜುಲೈ 10 ರಿಂದ ಆಗಸ್ಟ್ 8ರವರಗೆ ಪ್ರತಿ ಶನಿವಾರ ರಜೆ ಸಿಗಲಿದೆ.
ರಾತ್ರಿ ಕರ್ಫ್ಯೂ ಅವಧಿಯಲ್ಲಿ ಆಸ್ಪತ್ರೆ , ಮೆಡಿಕಲ್ ಸ್ಟೋರ್ಸ್, ಹಾಲು, ಹಣ್ಣು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳು ಲಭ್ಯವಿರಲಿದೆ.
ಮಾಲ್‍ಗಳು, ಸೂಪರ್ ಮಾರ್ಕೆಟ್‍ಗಳು, ದೇವಸ್ಥಾನ, ಮಸೀದಿ, ಚರ್ಚ್, ಮದ್ಯದ ಅಂಗಡಿಗಳು, ಬಾರ್ ಗಳು, ಹೋಟೆಲ್, ರೆಸ್ಟೋರೆಂಟ್, ಖಾಸಗಿ ವಾಹನ ಸಂಚಾರ ಬಂದ್ ಆಗಿರಲಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ