ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಜಾರಿಯಾಗಿರುವ ಲಾಕ್ ಡೌನ್ ತೆರವುಗೊಳಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದ್ದು, ಜೂನ್ 14ರ ಬಳಿಕ ಹಂತ ಹಂತವಾಗಿ ಅನ್ ಲಾಕ್ ಮಾಡಲು ಸಿದ್ಧತೆ ತಡೆಸಿದೆ.
ಲಾಕ್ ಡೌನ್ ಜಾರಿ ಬಳಿಕ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಆಯಾ ಜಿಲ್ಲೆಗಳ ಕೊರೊನಾ ಪಾಸಿಟಿವಿಟಿ ರೇಟ್ ಆಧರಿಸಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಕೊರೊನಾ ಸೋಂಕು ಶೇ.10ಕ್ಕಿಂತ ಕಡಿಮೆಯಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆಯಾಗಲಿದೆ. ಈ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ನಾಳೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ಇನ್ನು ರಾಜ್ಯದಲ್ಲಿ ಮೂರು ಹಂತಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ ಎನ್ನಲಾಗಿದೆ.
ಅನ್ ಲಾಕ್ : ಜಿಲ್ಲಾಧಿಕಾರಿಗಳ ಜೊತೆ ಸಿಎಂ ಯಡಿಯೂರಪ್ಪ ಚರ್ಚೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ