ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕಳೆದ ಒಂದು ತಿಂಗಳಿಂದ ಬಿದ್ದಿದ್ದ ಬೀಗ ತೆರವುಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಲಾಕ್ ಡೌನ್ ತೆರವಿನ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸುಳಿವು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಿರುವ ಭಾಗಗಳಲ್ಲಿ ಹಂತ ಹಂತವಾಗಿ ಅನ್ ಲಾಕ್ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಕೊರೊನಾ ಪಾಸಿಟಿವಿಟಿ ರೇಟ್ ಶೇ.5ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವುಗೊಳಿಸುವ ಬಗ್ಗೆ ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚಿಸಿ ನಾಲ್ಕೈದು ದಿನದೊಳಗಾಗಿ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.
ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಿರುವ ಬೆಂಗಳೂರು, ಯಾದಗಿರಿ, ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ ಸೇರಿದಂತೆ 7 ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವುಗೊಳಿಸಲು ಸರ್ಕಾರ ಮುಂದಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
100 ರೂಪಾಯಿ ಗಡಿ ತಲುಪಿದ ಪೆಟ್ರೋಲ್ ದರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ