Latest

*ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಐಡಿ ವಿಶೇಷ ನ್ಯಾಯಾಲಯ ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ.

ಪೊಲೀಸರ ವಿಚಾರಣೆಯಲ್ಲಿದ್ದ ಆರೋಪಿ ಒಡಿಶಾ ಮೂಲದ ಮಹೇಂದ್ರ ರಾಥೋಡ್ (42) ಎಂಬಾತನ ಸಾವಿಗೆ ಸಂಬಂಧಿಸಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಮಾಲೀಕನ ಮನೆಯಲ್ಲಿಯೇ ಕಳ್ಳತನ ಮಾಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾನಗರ ಠಾಣೆ ಪೊಲೀಸರು ಮಹೇಂದ್ರ ರಾಥೋಡ್ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಆತ ವಿಚಾರಣೆ ವೇಳೆ ಉಸಿರಾಟದ ತೊಂದರೆ, ಎದೆನೋವು ಕಣಿಸಿಕೊಂಡು ಕುಸಿದುಬಿದ್ದು ಸಾವನ್ನಪ್ಪಿದ್ದ. ಪೊಲೀಸ್ ಸಿಬ್ಬಂದಿಯ ನಿರ್ಲಕ್ಷ ಹಾಗೂ ದೈಹಿಕ ಹಲ್ಲೆಯಿಂದ ಸಾವನ್ನಪ್ಪಿದ್ದಾಗಿ ಸಿಐಡಿ ತನಿಖೆಯಲ್ಲಿ ಸಾಬೀತಾಗಿತ್ತು.

ಈ ಹಿನ್ನೆಲೆಯಲ್ಲಿ ಇಂದು ತೀರ್ಪು ಪ್ರಕಟಿಸಿರುವ ಸಿಐಡಿ ವಿಶೇಷ ಕೋರ್ಟ್, ಜೀವನ್ ಭೀಮಾನಗರ ಠಾಣೆಯ ಅಂದಿನ ಹೆಡ್ ಕಾನ್ಸ್ ಟೇಬಲ್ ಎಜಾಜ್ ಖಾನ್, ಕಾನ್ಸ್ ಟೇಬಲ್ ಗಳಾದ ಕೇಶವ ಮೂರ್ತಿ, ಮೋಹನ್ ರಾಮ್ ಹಾಗೂ ಸಿದ್ದಪ್ಪ ಬೊಮ್ಮನಹಳ್ಳಿ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಹಾಗೂ 30 ಸಾವಿರ ಹಾಗೂ 25 ಸಾವಿರ ದಂಡ ವಿಧಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button