Belagavi NewsBelgaum News

*ಮಾ.9 ರಂದು ಲೋಕ ಅದಾಲತ್*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ವೈವಾಹಿಕ, ಕೌಟುಂಬಿಕ ಮತ್ತು ಪಾಲು ವಿಭಾಗಕ್ಕೆ, ಬ್ಯಾಂಕುಗಳಿಗೆ ಸಂಬಂಧಪಟ್ಟ ಪ್ರಕರಣಗಳು ಹಾಗೂ ಚೆಕ್ ಬೌನ್ಸ, ಭಾರತ ದಂಡ ಸಂಹಿತೆಯ ರಾಜಿಯಾಗಬಲ್ಲ ಪ್ರಕರಣಗಳು, ಹಣಕಾಸಿನ ದಾವೆಗಳು, ಸಿವಿಲ್ ವ್ಯಾಜ್ಯಗಳು, ಮೋಟಾರ ವಾಹನ ಅಪಘಾತ ಪರಿಹಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಕಂದಾಯ ಪ್ರಕರಣಗಳು ಮತ್ತು ಇತರ ಎಲ್ಲಾ ರೀತಿಯ ರಾಜಿಯಾಗು ಪ್ರಕರಣಗಳ ಕುರಿತು ಹಾಗೂ ನ್ಯಾಯಾಲಯಗಳಲ್ಲಿ ತನಿಕೆಗೆ ಬಾಕಿ ಇರುವ ಪ್ರಕರಣಗಳ ಕುರಿತು ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರಾದ ಗೌರವಾನ್ವಿತ ಎಲ್. ವಿಜಯಲಕ್ಷ್ಮೀ ದೇವಿ ಇವರ ಮಾರ್ಗದರ್ಶನದಲ್ಲಿ ಬೆಳಗಾವಿಯ ಎಲ್ಲ ನ್ಯಾಯಾಲಯಗಳಲ್ಲಿ ಹಾಗೂ ಎಲ್ಲಾ ತಾಲೂಕುಗಳ ನ್ಯಾಯಾಲಯಗಳಲ್ಲಿ ಮಾರ್ಚ:೦೯ ೨೪ ರಂದು ಬೆಳಿಗ್ಗೆ ೧೧ ಘಂಟೆಯಿಂದ ಜಿಲ್ಲೆಯ ಎಲ್ಲಾ ನ್ಯಾಯಾಧೀಶರ ಹಾಗೂ ವಕೀಲರ ಸಹಯೋಗದಲ್ಲಿ ಲೋಕ ಅದಾಲತನ್ನು ಹಮ್ಮಿಕೊಳ್ಳಲಾಗಿದೆ.


ಸದರಿ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ತೆಗೆದುಕೊಂಡು ರಾಜಿ ಸಂಧಾನದ ಮುಖಾಂತರ ಇತ್ಯರ್ಥಪಡಿಸಲಾಗುವುದು. ಬ್ಯಾಂಕುಗಳು, ಕಕ್ಷಿದಾರರು ಹಾಗೂ ಜನ ಸಾಮಾನ್ಯರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಳಗಾವಿ ತಾಲೂಕಾ ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button