ಪ್ರಗತಿವಾಹಿನಿ ಸುದ್ದಿ: ಎಂಎಲ್ ಸಿ ಸಿ.ಟಿ.ರವಿ ವಿಧನಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷಿ ಸಿಎಂ ಪುತ್ರ ಯತೀಂದ್ರಗೆ ವಿಚಾರಣೆಗೆ ಹಾಜರಾಗುವಂತೆ ಇಂದು ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಲು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ.
ಸಿಐಡಿ ಡಿವೈಎಸ್‌ಪಿ ಕೇಶವಮೂರ್ತಿ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, MLC ಟಿ.ಟಿ ಶ್ರೀನಿವಾಸ್‌ಗೆ ನೋಟಿಸ್ ಜಾರಿ ಮಾಡಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಳರ್ ಅಕ್ಕಪಕ್ಕ ಸದನದಲ್ಲಿ ಕುಳಿತಿದ್ದ ಯತೀಂದ್ರ ಸಿದ್ದರಾಮಯ್ಯ ಪ್ರತ್ಯಕ್ಷ ಸಾಕ್ಷಿಯಾಗಿದ್ದಾರೆ. ಕಲ್ಬುರ್ಗಿ ಮೂಲದ MLC ಬೇಗಂ ಎಂಬುವರಿಗೂ ನೋಟಿಸ್ ನೀಡಲಾಗಿದೆ. ಇದುವರೆಗೂ ಹಿರಿಯ ನಟಿ ಹಾಗೂ MLC ಉಮಾಶ್ರೀ, MLC ರಾಮೋಜಿ ಹಾಗೂ MLC ನಾಗರಾಜ್ ಯಾದವ್ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ