
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಸೇರಿದಂತೆ ೬ ಅಭ್ಯರ್ಥಿಗಳು ೯ ನಾಮಪತ್ರಗಳನ್ನು ಸೋಮವಾರ (ಮಾ.೨೯) ಸಲ್ಲಿಸಿದರು.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ವಿವೇಕಾನಂದ ಘಂಟಿ, ಸರ್ವ ಜನತಾ ಪಕ್ಷದಿಂದ ಅಶೋಕ ಪಾಂಡಪ್ಪಾ ಹಣಜಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಶುಭಂ ಶೆಳಕೆ, ನಾಗಪ್ಪ ಕಳಸನ್ನವರ, ಹನಮಂತ ಶಿವಪ್ಪಾ ನಾಗನೂರ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ೪ ನಾಮಪತ್ರಗಳನ್ನು ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕರಾದ ಆರ್.ವಿ. ದೇಶಪಾಂಡೆ, ಎಮ್.ಬಿ.ಪಾಟೀಲ, ಲಕ್ಷ್ಮೀ ಹೆಬ್ಬಾಳಕರ್, ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ ಮತ್ತು ಮಾಜಿ ಶಾಸಕರಾದ ಫಿರೋಜ್ ಸೇಠ್ ಅವರು ಉಪಸ್ಥಿತರಿದ್ದರು.
ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ನಾಮಪತ್ರ ಸ್ವೀಕರಿಸಿದರು.
ಬೆಳಗಾವಿ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ