*ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಸಿದ್ಧ; ಹೊಸಬರಿಗೂ ಅವಕಾಶ; ಆರ್.ಅಶೋಕ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಅದಾಗಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದ್ದು, ಇಂದು ರಾತ್ರಿ ಅಥವಾ ನಾಳೆ ಎರಡನೆ ಪಟ್ಟಿ ಬಿಡುಗಡೆಯಾಗಲಿದೆ. ಎರಡನೇ ಪಟಿಯಲ್ಲಿ ಕರ್ನಾಟಕ ಅಭ್ಯರ್ಥಿಗಳ ಹೆಸರು ಇರಲಿದೆ.
ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಮಾಹಿತಿ ನೀಡಿದ್ದು, ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆದಿದ್ದು, ಕೆಲ ಕ್ಷೇತ್ರಗಳ ಟಿಕೆಟ್ ಪೆಂಡಿಂಗ್ ಇದೆ ಎಂದರು.
ಕೆಲ ಕ್ಷೇತ್ರಗಳ ಟಿಕೆಟ್ ಪೆಂಡಿಂಗ್ ಆಗಿದೆ. ಮತ್ತೆ ಕೆಲ ಕ್ಷೇತ್ರಗಳ ಟಿಕೆಟ್ ಬಗ್ಗೆ ಮಾತುಕತೆಹಂತದಲ್ಲಿದೆ. ನಾಳೆಯೊಳಗೆ ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು,
ಗೆಲ್ಲುವ ಮಾನದಂಡದ ಮೇಲೆ ಅಭ್ಯರ್ಥಿಗೆ ಟಿಕೆಟ್ ತೀರ್ಮಾನ ಮಡಲಾಗುತ್ತಿದೆ. ಹೊಸ ಮುಖಗಳಿಗೂ ಅವಕಾಶ ಕೊಟ್ಟಿದ್ದಾರೆ. ಹಳಬರಿಗೂ ಅವಕಾಶವಿದೆ. ಹಾಲಿ ಸಂಸದ ಕಾರ್ಯವೈಖರಿ ಬಗ್ಗೆಯೂ ಚರ್ಚೆಯಾಗಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ