ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನವಣೆಯ ಎರಡನೇ ಹಂತದ ಹಾಗೂ ರಾಜ್ಯದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದೆ. ಅಂದು ರಾಜ್ಯದ ದಕ್ಷಿಣದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಲ್ಲೆಲ್ಲೂ ಕಟ್ಟೆಚ್ಚರ ವಹಿಸಿದೆ.
ನ್ಯಾಯ ಸಮ್ಮತ ಹಾಗೂ ಶಾಂತಿಯುತ ಮತದಾನ ನಡೆಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರಿನ 5 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಸಂಜೆಯಿಂದಲೇ ನಿಷೇಧಾಜ್ಞೆ ಜಾರಿಗೆ ಬರಲಿದೆ.
ಇಂದು ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಾಗಲಿದೆ.ಏಪ್ರಿಲ್ 26ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಇಂದು ಸಂಜೆಯಿಂದ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ಬೆಂಗಳೂರಿನ 5 ಲೋಕಸಭಾ ಕ್ಷೇತ್ರಗಳಲ್ಲಿ 13 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.
11 ಸಿಆರ್ ಪಿಎಫ್, 14 ಕೆ ಎಸ್ ಆರ್ ಪಿ, 40 ಸಿಎ ಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ