Election NewsKannada NewsLatest

*403.40 ಕೋಟಿ ಮೌಲ್ಯದ ನಗದು, ಮದ್ಯ, ಚಿನ್ನಾಭರಣ ಜಪ್ತಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ ಮಾರ್ಚ್ 16ರಿಂದ ಈವರೆಗೆ ರಾಜ್ಯದಲ್ಲಿ ಬರೋಬ್ಬರಿ 403.40 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ನಗದು, ಮದ್ಯ, ಮಾದಕ ವಸ್ತುಗಳು, ಚಿನ್ನ, ಬೆಳ್ಳಿ, ವಜ್ರ ಸೇರಿದಂತೆ 403.40 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಫ್ಲೈಯಿಂಗ್ ಸ್ಕ್ವಾಡ್, ಪೊಲೀಸರು 1975 ಎಫ್ ಐ ಆರ್ ದಾಖಲಿಸಿದ್ದಾರೆ.

ಅಬಕಾರಿ ಇಲಾಖೆ 2,781 , ಪರವಾನಗಿ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 4,155 ಪ್ರಕರಣಗಳು, ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 15(ಎ) ಅಡಿಯಲ್ಲಿ 162 ಎನ್ ಡಿ ಪಿ ಎಸ್ ಹಾಗೂ 23,522 ಪ್ರಕರಣಗಳನ್ನು ದಾಖಲಿಸಲಾಗಿದೆ.

Home add -Advt

ಇದೇ ವೇಳೆ 1739 ವಿವಿಧ ರೀತಿಯ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. 49.52 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.


Related Articles

Back to top button