ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಅಕ್ರಮಗಳ ಮೇಲೆ ಚುನಾವಣಾ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ.
ಅಕ್ರಮವಾಗಿ ಸಾಗಿಸುವ ಹಣ, ಮದ್ಯ, ಗಿಫ್ಟ್, ಮಾದಕ ವಸ್ತುಗಳ ಮೇಲೆ ನಿಗಾ ವಹಿಸಿರುವ ಅಧಿಕಾರಿಗಳು ಅವಗಳನ್ನು ಜಪ್ತಿ ಮಾಡುತ್ತಿದ್ದಾರೆ. ಬಾಗಲಕೋಟೆ ಹಾಗೂ ಬೆಂಗಳೂರಿನಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 8 ಲಕ್ಷ ರೂಪಾಯಿ ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಬಾಗಲಕೋಟೆಯ ನಾಯನೇಗಲಿ ಚೆಕ್ ಪೋಸ್ಟ್ ನಲ್ಲಿ ಚುನವಣಾ ಅಧಿಕಾರಿಗಳು 6 ಲಕ್ಷ ರೂಪಾಯಿ ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೊಂದೆಡೆ ಹೊಸೂರು ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಲಕ್ಷ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ದಾಖಲೆಯಿಲ್ಲದೇ ಈ ಹಣವನ್ನು ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ