ಪ್ರಗತಿವಾಹಿನಿ ಸುದ್ದಿ: ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಅಥಣಿ ಪಟ್ಟಣದಲ್ಲಿ ಬಿಜೆಪಿ ಅಥಣಿ ಮಂಡಲದ ಪದಾಧಿಕಾರಿಗಳು ಬೂತ್ ಅಧ್ಯಕ್ಷರು, ಬಿಎಲ್ಎ – 2 ಗಳ ಸಭೆ ಹಾಗೂ ಚುನಾವಣೆ ಪೂರ್ವತಯಾರಿ ಕುರಿತು ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಸಭೆ ನಡೆಸಿ ಮಾತನಾಡಿದರು.
ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅವಧಿಯಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿ ಭಾರತ ದೇಶ ಕಂಡಿದೆ. ದೇಶದ ಕೊನೆಯ ವ್ಯಕ್ತಿಯವರೆಗೂ ಕೇಂದ್ರ ಸರ್ಕಾರದ ಯೋಜನೆಗಳು ತಲುಪಿದ್ದು ಚಿಕ್ಕೋಡಿ ಕ್ಷೇತ್ರದ ಎಲ್ಲ ಜನತೆಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ನಾವು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದೇವೆ. ಈ ಬಾರಿ ಮತ್ತೊಮ್ಮೆ ನನ್ನನ್ನು ಗೆಲ್ಲಿಸಿ ಮೋದಿ ಜಿ ಅವರ ಕೈ ಬಲಪಡಿಸಬೇಕೆಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಮಹೇಶ ಕುಮಟಳ್ಳಿ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಸತೀಶ ಅಪ್ಪಾಜಿಗೋಳ, ಮಾಜಿ ಜಿಲ್ಲಾಧ್ಯಕ್ಷರಾದ ಡಾ. ರಾಜೇಶ ನೇರ್ಲಿ, ಮಂಡಲ ಅಧ್ಯಕ್ಷರಾದ ಡಾ. ರವಿ ಸಂಕ, ಮಾಜಿ ಜಿ.ಪ. ಸದಸ್ಯರಾದ ಸಿದ್ದಪ್ಪ ಮುದಕಣ್ಣವರ, ಗಿರೀಶ ಬುಟಾಳಿ, ಸೌ. ಉಜ್ವಲಾ ಬಡವನಾಚೆ, ಸ್ಥಳೀಯ ಮುಖಂಡರು, ಗಣ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ