ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ಮೊದಲ ಹಂತದ ಮತದಾನ ನಡೆಯಲಿರುವ ರಾಜ್ಯದ 14 ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.
ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಇಂದು ಹಾಗೂ ನಾಳೆ ಅಭ್ಯರ್ಥಿಗಳಿಗೆ ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ. ಮತದಾರರಲ್ಲದವರು ಕ್ಷೇತ್ರ ವ್ಯಾಪ್ತಿಯಿಂದ ಹೊರ ಹೋಗುವಂತೆ ಸೂಚನೆ ನೀಡಲಾಗಿದೆ.
ಏಪ್ರಿಲ್ 26ರಂದು ಶುಕ್ರವಾರ ದೇಶದಲ್ಲಿ ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನ ನಡೆಯಲಿದೆ. ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಉಳಿದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ