*ಎಡನೇ ಹಂತದ ಮತದಾನ: ಘಟಾನುಘಟಿ ನಾಯಕರಿಂದ ಮತದಾನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಬೆಳಗಾವಿ ಲೋಸಕಭಾ ಹಾಗೂ ಚೊಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಬೆಳಗ್ಗೆಯಿಂದಲೇ ಭರ್ಜರಿ ಮತದಾನ ನಡೆಯುತ್ತಿದೆ. ಈ ಎರಡು ಲೋಕಸಭಾ ವ್ಯಾಪ್ತಿಯಲ್ಲಿ ಗಣ್ಯರು ರಾಜಕೀಯ ನಾಯಕರು ತಮ್ಮ ಹಕ್ಕು ಚಲಾಯಿಸುವ ಮೂಲಕ ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ಕರೆ ನೀಡಿದ್ದಾರೆ.
ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ್ ಅವರು ತಮ್ಮ ಪತ್ನಿ ಜೊತೆ ಹೋಗಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, ಸಂಸದೆ ಮಂಗಳ ಅಂಗಡಿ ಹಾಗೂ ಕುಟುಬಂಸ್ಥರು ಬೆಳಗಾವಿಯ ವಿಶ್ವೇಶ್ವರ ನಗರದಲ್ಲಿ ಮತದಾನ ಮಾಡಿದ್ದಾರೆ. ಬಿಜೆಪಿ ಮುಖಂಡೆ ಡಾ. ಸೋನಾಲಿ ಸರ್ನೋಬತ ಸೇರಿದಂತೆ ಬೆಳಗಾವಿ ನಗರದಲ್ಲಿ ಉದ್ಯಮೀಗಳು, ಕಾರ್ಮಿಕರು ಸೇರಿದಂತೆ ಅನೇಕ ಜನ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಮತ ಚಲಾಯಿಸಿದ ಪ್ರಿಯಂಕಾ ಜಾರಕಿಹೊಳಿ
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು, ಹಳೆ ವಂಟಮೂರಿ ಗ್ರಾಮದಲ್ಲಿ ಸಾಂವಿಧಾನಿಕ ಹಕ್ಕು ಚಲಾಯಿಸಿದರು. “ಈಗ ನಿಮ್ಮ ಸರದಿ, ಎಲ್ಲರೂ ತಪ್ಪದೇ ತಮ್ಮ ಹಕ್ಕು ಚಲಾಯಿಸಿ. ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗಾಗಿ ಮತ್ತು ಯುವ ಭಾರತಕ್ಕಾಗಿ ಮತದಾನ ಮಾಡಿ ಎಂದು ಕರೆ ನೀಡಿದ್ದಾರೆ.
ಡಾ. ಅಂಜಲಿ ನಿಂಬಾಳಕರ ಅವರಿಂದ ಮತ ಚಲಾವಣೆ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳಕರ ಅವರು ಖಾನಾಪುರ ಪಟ್ಟಣದ ಪಿಂಕ್ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ