Kannada NewsKarnataka NewsLatestPolitics
*ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ; ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಹಾಗೂ ಜೆಡಿಎಸ್ ನಡುವೆ ಮೈತ್ರಿ ಮಾತುಕತೆ ನಡೆದಿದ್ದು, ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಇನ್ನೂ ಸಮಯವಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನ ಜೆ.ಪಿ.ನಗರದ ತಿರುಮಲಗಿರಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ-ಹವನ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ ಜೊತೆ ಮೈತ್ರಿ ವಿಚಾರವಾಗಿ ಇನ್ನೂ ಸಮಯವಿದೆ ಎಂದಿದ್ದಾರೆ.
ತಂದೆಯವರ ಆರೋಗ್ಯ ವೃದ್ಧಿಗಾಗಿ ಪೂಜೆಸಲ್ಲಿಸಿದ್ದೇನೆ. ನಮ್ಮ ಕುಟುಂಬದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆ, ಅನಾರೋಗ್ಯ ಹಿನ್ನೆಲೆಯಲ್ಲಿ ಆರೋಗ್ಯ ವೃದ್ಧಿಗಾಗಿ ಪೂಜೆ ಮಾಡಿದ್ದೇನೆ. ಹಿಂದೂ ಧರ್ಮದ ಸಂಪ್ರದಾಯದಂತೆ ಧಾರ್ಮಿಕ ಪೂಜೆ ನೆರವೇರಿಸಿದ್ದೇನೆ ಎಂದು ಹೇಳಿದರು.