Latest

ಮತದಾನ ಜಾಗೃತಿಗಾಗಿ ಸಹಿ ಅಭಿಯಾನ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಲೋಕಸಭಾ ಚುನಾವಣೆ ಪ್ರಯುಕ್ತ ಯುವ ಮತದಾರರಲ್ಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಯುವ ಮತದಾರರ ಮತದಾನ ಜಾಗೃತಿಗಾಗಿ ಸಹಿ ಅಭಿಯಾನ ಕಾರ್ಯಕ್ರಮವನ್ನು ನಗರದ ಗೋಗಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. 
ಸಾವಿರಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸಹಿ ಮಾಡುವ ಮೂಲಕ ಕಡ್ಡಾಯ ಮತದಾನಕ್ಕಾಗಿ ಸಂಕಲ್ಪ ಮಾಡಿದರು. ವಿದ್ಯಾರ್ಥಿಗಳಿಗೆ ಬುಕ್‌ಮಾರ್ಕ್ ವಿತರಿಸಲಾಯಿತು.  ಜಿಲ್ಲಾ ಸ್ವೀಪ್ ಸಹಾಯಕ ಅಧಿಕಾರಿ ರವಿ ಭಜಂತ್ರಿ, ತಾಲೂಕು ಯೋಜನಾಧಿಕಾರಿ ಪಿ.ಪಿ. ದೇಶಪಾಂಡೆ, ಜಿಲ್ಲಾ ಪಂಚಾಯತ ಕಚೇರಿಯ ಲೆಕ್ಕ ಅಧೀಕ್ಷಕ ಬಸನಾಳ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ತಂಡದ ಸದಸ್ಯರು ಉಪಸ್ಥಿತರಿದ್ದರು. 

Related Articles

Back to top button