Kannada NewsKarnataka NewsLatestNationalPolitics

*ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ರಾಜಕೀಯ ಪಕ್ಷಗಳು ಮತದಾರರ ಮನಗೆಲ್ಲಲು ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ನಡುವೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ರಾಜ್ಯದ ಘಟಾನುಘಟಿ ಕೈ ನಾಯಕರಿಗೆ ಸ್ಥಾನ ನೀಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಲಕ್ಷ್ಮಣ ಸವದಿ ಸೇರಿದಂತೆ ಹಲವರು ತಾರಾ ಪ್ರಚಾರಕರಾಗಿ ಸ್ಥಾನ ಪಡೆದುಕೊಂಡಿದ್ದಾರೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಹೀಗಿದೆ:
ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ರಣದೀಪ್ ಸಿಂಗ್ ಸುರ್ಜೇವಾಲಾ, ಜೈರಾಮ್ ರಮೇಶ್, ಎಂ.ವೀರಪ್ಪ ಮೊಯ್ಲಿ, ಲಕ್ಷ್ಮಣ ಸವದಿ, ಬಿ.ವಿ.ಶ್ರೀನಿವಾಸ್, ಕೆ.ಜೆ.ಜಾರ್ಜ್, ಬಿ.ಕೆ.ಹರಿಪ್ರಸಾದ್, ವಿನಯ್ ಕುಮಾರ್ ಸೊರಕೆ, ಆರ್.ವಿ.ದೇಶಪಾಂಡೆ, ಹೆಚ್.ಕೆ.ಪಾಟೀಲ್, ಎಂಬಿ.ಪಾಟೀಲ್, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಪಿಜಿಆರ್ ಸಿಂಧ್ಯಾ, ಅಭಿಷೇಕ್ ದತ್, ಸತೀಶ್ ಜಾರಕಿಹೊಳಿ, ಉಮಾಶ್ರೀ, ಪಿ.ಟಿ.ಪರಮೇಶ್ವರ್ ನಾಯ್ಕ್, ಡಾ.ಪುಷ್ಪಾ ಅಮರನಾಥ್, ಮಯೂರ್ ಜಯಕುಮಾರ್, ಸೈಯದ್ ನಾಸೀರ್, ತನ್ವೀರ್ ಸೇಠ್, ಹೆಚ್.ಎಂ.ರೇವಣ್ಣ, ಮಧು ಬಮ್ಗಾರಪ್ಪ, ವಿ.ಎಸ್.ಉಗ್ರಪ್ಪ, ಎಲ್.ಹನುಮಂತಯ್ಯ, ಬಿ.ಸೋಮಶೇಖರ್, ಜಮೀರ್ ಅಹ್ಮದ್ ಅವರನ್ನು ಸ್ಟಾರ್ ಪ್ರಚಾರಕರನ್ನಾಗಿ ಕಾಂಗ್ರೆಸ್ ಬಳಸಿಕೊಲ್ಳಲಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button