Kannada NewsLatestNationalPolitics

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಮಹಿಳೆಯರಿಗೆ 1 ಲಕ್ಷ ಸಹಾಯಧನ ಘೋಷಣೆ

ದೇಶದ ಜನತೆಗೆ ಮತ್ತಷ್ಟು ಗ್ಯಾರಂಟಿ ಘೋಷಣೆ

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಭರ್ಜರಿ ಕಸರತ್ತು ನಡೆಸಿವೆ. ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು.

ಪ್ರಣಾಳಿಕೆಯಲ್ಲಿ 5 ವಲಯಗಳನ್ನು ಕೇಂದ್ರೀಕರಿಸಿರುವ ಕಾಂಗ್ರೆಸ್ 25 ಗ್ಯಾರಂಟಿ ಗಳನ್ನು ಘೋಷಣೆ ಮಾಡಿದೆ. ಯುವನ್ಯಾಯ, ನಾರಿ ನ್ಯಾಯ, ಕಿಸಾನ್ ನ್ಯಾಯ, ಶ್ರಮಿಕ್ ನ್ಯಾಯ, ಹಿಸ್ಸೇದಾರಿ ನ್ಯಾಯ ಘೋಷಿಸಿದ್ದು, ಘರ್ ಘರ್ ಗ್ಯಾರಂಟಿ ಘೋಷ ವಾಕ್ಯದೊಂದಿಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಪ್ರಮುಖವಾಗಿ ಬಡ ಮಹಿಳೆಯರಿಗೆ ವಾರ್ಷಿಕವಾಗಿ ಮಹಾಲಕ್ಷ್ಮೀ ಯೋಜನೆಯಡಿ 1 ಲಕ್ಷ ಸಹಾಯಧನ ನೀಡುವುದಾಗಿ ಕಾಂಗ್ರೆಸ್ ಘೋಷಿಸಿದೆ.

Related Articles

Back to top button