*ರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ಬಂದ ‘ಆಪರೇಷನ್’; ಬಿಜೆಪಿ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಪ್ಲಾನ್; ಏನಿದು ಯೋಜನೆ?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಆಪರೇಷನ್ ಮೂಲಕ ಶಾಸಕರನ್ನು ಸೆಳೆಯುವ ವಿಚಾರ ಸಂಚಲನ ಸೃಷ್ಟಿಸಿದೆ. ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ ಎಂಬ ಮಾತು ಕೇಳಿಬರುತ್ತಿದೆ.
ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುಸಾಧಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಇದೀಗ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಆಪರೇಷನ್ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ.
ಲೋಕಸಭಾ ಚುನಾವಣಾ ಗೆಲುವಿಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರ್ಜರಿ ಪ್ಲಾನ್ ಮಾಡಿದ್ದಾರೆ. ಖುದ್ದು ಡಿ.ಕೆ.ಶಿವಕುಮಾರ್ ಅವರೇ ಆಪರೇಷನ್ ಸುಳಿವು ನೀಡಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಸಂಸದ ಡಿ.ಕೆ.ಸುರೇಶ್, ಯಾರೇ ಬಂದರೂ ಪಕ್ಷಕ್ಕೆ ಸ್ವಾಗತ ಎಂದಿದ್ದಾರೆ.
ವಿ.ಸೋಮಣ್ಣ ಅವರನ್ನು ಕಾಂಗ್ರೆಸ್ ಗೆ ಸೆಳೆದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಲಾಭ ಪಡೆಯುವ ಬಗ್ಗೆ ಲೆಕ್ಕಾಚಾರ ಹಾಕಲಾಗಿದೆ. ಮಾಜಿ ಸಚಿವ ಬೈರತಿ ಬಸವರಾಜ್ ಅವರನ್ನೂ ಪಕ್ಷಕ್ಕೆ ಮರಳಿ ಕರೆಯುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. ಕೆ.ಗೋಪಾಲಯ್ಯ ಅವರನ್ನು ಸೆಳೆಯಲು ಪ್ಲಾನ್ ರೂಪಿಸಲಾಗಿದೆ. ಈ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಕೆಲ ಶಾಸಕರನ್ನು ಮತ್ತೆ ಕಾಂಗ್ರೆಸ್ ಗೆ ಸೆಳೆಯುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ