Election NewsPolitics

*ಲೋಕಸಭಾ ಚುನಾವಣೆ: ಡಿ.ಕೆ ಸಹೋದರರಿಂದ ಮತದಾನ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಿತು. ರಾಜಕೀಯ ನಾಯಕರು ತಮ್ಮ ಕುಟುಂಬ ಸಮೇತ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದರು.

ಸಿಎಂ ಸಿದ್ದರಾಮಯ್ಯ ತಮ್ಮ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಾಗೂ ಕುಟುಂಬದ ಜೊತೆ ತಮ್ಮ ತವರು ಕ್ಷೇತ್ರ ಸಿದ್ದರಾಮಯ್ಯನಹುಂಡಿಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ, ಪತ್ನಿ ಹಾಗೂ ಪುತ್ರಿ, ಕುಟುಂಬ ಸದಸ್ಯರ ಜೊತೆ ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರದ ದೊಡ್ಡಆಲಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಮತಗಟ್ಟೆಯಲ್ಲಿ ಮತದಾನ ಮಾಡಿದರು.

Home add -Advt

ಇದೇ ವೇಳೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಕೂಡ ಮತದಾನ ಮಾಡಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button