
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಅರಸಿಕೆರೆಯ ಕಾಳೇನಹಳ್ಳಿಯಲ್ಲಿ ನಟ ಡಾಲಿ ಧನಂಜಯ್ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದರು.
ಪ್ರತಿ ಬಾರಿಯಂತೆ ಈ ಬಾರಿಯೂ ಕುಟುಂಬದ ಜೊತೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು. ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಹಳ್ಳಿ ಸ್ಟೈಲ್ ನಲ್ಲಿ ಬಂದು ಹಕ್ಕು ಚಲಾಯಿಸಿದ್ದು ವಿಶೇಷವಾಗಿತ್ತು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಜನರು ಬಿಸಿಲನ್ನು ಲೆಕ್ಕಿಸದೇ ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ