ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ.
ಏಪ್ರಿಲ್ 19 ಮೊದಲ ಹಂತ, ಏಪ್ರಿಲ್ 26 2ನೇ ಹಂತ, ಮೇ 7ರಂದು ಮೂರನೇ ಹಂತ, ಮೇ 13 ನಾಲ್ಕನೇ ಹಂತ, ಮೇ 20ರಂದು 5ನೇ ಹಂತ, ಮೇ 25ರಂದು 6ನೇ ಹಂತ, ಜೂನ್ 1ರಂದು 7ನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ 2 ಹಂತಗಳಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಎಂಬ ಎರಡು ಭಾಗಗಳಲ್ಲಿ ಮತದಾನ ನಡೆಯಲಿದೆ.
ಏಪ್ರಿಲ್ 26ರಂದು ಕರ್ನಾಟಕದ ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಮೇ 7ರಂದು ಉತ್ತರ ಕರ್ನಾಟಕದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದೆ.
ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಏಪ್ರಿಲ್ 26ರಂದು – ಚಿತ್ರದುರ್ಗ,ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ,ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರದಲ್ಲಿ ಮತದಾನ ನಡೆಯಲಿದೆ.
ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮೇ 7ರಂದು – ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರ್ಗಿ, ಬೀದರ್, ಹುಬ್ಬಳ್ಳಿ-ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರದಲ್ಲಿ ಮತದಾನ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ