Uncategorized

*ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರಾ ಯತೀಂದ್ರ ಸಿದ್ದರಾಮಯ್ಯ; ಈ ಬಗ್ಗೆ ಸಿಎಂ ಪುತ್ರ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಮೈಸೂರು: 2024ರ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿವೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಸ್ವತ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಗೆ ಇನ್ನೂ 8 ತಿಂಗಳು ಇದೆ. ಸ್ಪರ್ಧೆ ಬಗ್ಗೆ ನಾನಾಗಲಿ, ತಂದೆಯವರಾಗಲಿ ಇನ್ನೂ ಚರ್ಚೆ ನಡೆಸಿಲ್ಲ. ಪಕ್ಷ ಸೂಚಿಸಿದರೆ ಆದೇಶ ಪಾಲಿಸಲು ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು. ಹಾಗಾಗಿ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಒಂದು ವೇಳೆ ನಾನು ಸ್ಪರ್ಧೆ ಮಾಡಬೇಕು ಎಂದು ಎಂದು ಪಕ್ಷ ಸೂಚಿಸಿದರೆ ಆದೇಶ ಪಾಲನೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಇಚ್ಛೆ ವ್ಯಕ್ತಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button