ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮತಗಟ್ಟೆಗಳಲ್ಲಿ ಮತಯಂತ್ರಗಳ ಸಿದ್ಧತೆ, ಚುನಾವಣಾ ಸಿಬ್ಬಂದಿಗಳ ರವಾನೆ ಸಿದ್ಧತೆ ಬರದಿಂದ ನಡೆಯುತ್ತಿದೆ. ಈ ನಡುವೆ ಇಂದು ಚುನಾವಣಾ ಸಿಬ್ಬಂದಿಗಳಿಂದ ಅಂಚೆ ಮತದಾನ ಆರಂಭವಾಗಿದೆ.
ಚುನಾವಣಾ ಮತಗಟೆಗೆ ತೆರಳುವ ಮುನ್ನ ಚುನಾವಣಾ ಸಿಬ್ಬಂದಿಗಳು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಂಗಳೂರಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ನಿರ್ಮಿಸಲಾಗಿರುವ ಮತಗಟ್ಟೆ ಕೇಂದ್ರದಲ್ಲಿ ಚುನವಣಾ ಸಿಬ್ಬಂದಿಗಳು ಅಂಚೆಮತದಾನ ಮಾಡುವ ಮೂಲಕ ತಮ್ಮ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಬಳಿಕ ಮತಗಟ್ಟೆಗಳಿಗೆ ಸಿಬ್ಬಂದಿಗಳು ತೆರಳಲಿದ್ದಾರೆ. ನಾಳೆ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ-ಚಿಕ್ಕಮಗಳೂರು ಈ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ