Kannada NewsKarnataka NewsLatestPolitics

*ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ*

ಮಂಡ್ಯದಿಂದ ಮಾಜಿ ಸಿಎಂ HDK ಕಣಕ್ಕೆ


ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ಗೆ ಮೂರು ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ಮೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ, ಕೋಲಾರ, ಹಾಸನ ಲೋಕಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಿಸಿದರು. ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ವತಃ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಈ ಮೂಲಕ ಬಿಜೆಪಿಗೆ ಬೆಂಬಲ ಘೋಷಿಸಿದ್ದ ಮಂಡ್ಯ ಸಂಸದೆ ಸುಮಲತಾಗೆ ನಿರಾಸೆಯಾಗಿದೆ.

ಕೋಲಾರ ಲೋಕಸಭಾ ಕ್ಷೇತ್ರದಿಂದ ಮಲ್ಲೇಶ್ ಬಾಬು, ಹಾಸನದಿಂದ ನಿರೀಕ್ಷೆಯಂತೆ ಪ್ರಜ್ವಲ್ ರೇವಣ್ಣಗೆ ಜೆಡಿಎಸ್ ಟಿಕೆಟ್ ಘೋಷಿಸಲಾಗಿದೆ.

Related Articles

Back to top button