*ಲೋಕಸಭಾ ಚುನಾವಣೆ ರಣತಂತ್ರ; ಜೆಡಿಎಸ್ ನಾಯಕರಿಗೆ ಮಹತ್ವದ ಸೂಚನೆ ನೀಡಿದ ಹೆಚ್.ಡಿ.ಕೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿ ಪೂರ್ವ ಸಿದ್ಧತೆ ಹಾಗೂ ಸ್ಥಳೀಯ ಮಟ್ಟದಲ್ಲಿ ಮಿತ್ರಪಕ್ಷ ಬಿಜೆಪಿ ಜತೆ ನಾಯಕರು, ಕಾರ್ಯಕರ್ತರ ಜತೆ ಹೊಂದಾಣಿಕೆ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಸಭೆ ನಡೆಸಿದರು.
ಜೆಪಿ ಭವನದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷರು, ಶಾಸಕರು, ಮಾಜಿ ಶಾಸಕರು,ಮಾಜಿ ಸಚಿವರು ಇನ್ನಿತರೆ ಮುಖಂಡರು ಭಾಗಿಯಾಗಿದ್ದರು.
ಲೋಕಸಭೆ ಚುನಾವಣೆಗೆ ಇನ್ನು ಕೆಲ ತಿಂಗಳಷ್ಟೇ ಬಾಕಿ ಉಳಿದಿರುವ ಹಿನೆಲ್ಲೆಯಲ್ಲಿ ಪಕ್ಷದ ಸಂಘಟನೆ ಹಾಗೂ ಚುನಾವಣೆ ಸಿದ್ಧತೆಗಳನ್ನು ವೇಗಗೊಳಿಸಿರುವ ಮಾಜಿ ಮುಖ್ಯಮಂತ್ರಿಗಳು; ಕ್ಷೇತ್ರ ಹಂಚಿಕೆಯ ಬಗ್ಗೆ ಇನ್ನು ಕೆಲ ದಿನಗಳಲ್ಲಿ ನಿರ್ಧಾರ ಆಗಲಿದೆ. ಆದರೆ, ಎಲ್ಲಾ 28 ಲೋಕಸಭೆ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು, ಮುಖಂಡರು ಪರಸ್ಪರ ಹೊಂದಾಣಿಕೆ, ಸಮನ್ವಯತೆಯಿಂದ ಕೆಲಸ ಮಾಡುವುದಕ್ಕೆ ಅಗತ್ಯವಾಗಿ ಎಲ್ಲಾ ಕ್ರಮಗಳನ್ನು ವಹಿಸಲಾಗುವುದು ಎಂದು ತಿಳಿಸಿದರು.
ಅಲ್ಲದೆ; ರಾಜ್ಯದ ಎಲ್ಲಾ ಲೋಕಸಭೆ ಕ್ಷೇತ್ರಗಳ ನಾಯಕರ ಅಭಿಪ್ರಾಯ ಆಲಿಸಿದ ಮಾಜಿ ಮುಖ್ಯಮಂತ್ರಿಗಳು; ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸುವ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮ ಕರ್ತವ್ಯ ಆಗಬೇಕು. ಈ ದೇಶದ ಪ್ರಧಾನಿ ಹಾಗೂ ಮಾಜಿ ಪ್ರಧಾನಿಗಳ ನಡುವೆ ಆಗಿರುವ ಮೈತ್ರಿ ಚರ್ಚೆ ಫಲಪ್ರದವಾಗಿ ಕಾಂಗ್ರೆಸ್ ಆತಂಕಗೊಂಡಿದೆ. ಯಾರೇ ಆಗಲಿ ಪ್ರತಿಷ್ಠೆ ಬದಿಗಿರಿಸಿ ಕೆಲಸ ಮಾಡಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಲೀಲಾದೇವಿ ಆರ್ ಪ್ರಸಾದ್, ಡಿ.ನಾಗರಾಜಯ್ಯ, ಜೆಡಿಎಸ್ ಮಾಜಿ ಅಧ್ಯಕ್ಷರಾದ ಹೆಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಷೆಂಪೂರ್, ಅಲ್ಕೊಡ್ ಹನುಮಂತಪ್ಪ, ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕರಾದ ಶಾರದಾ ಪೂರ್ಯ ನಾಯಕ್, ಶಾಸಕರಾದ ವೆಂಕಟ ಶಿವಾರೆಡ್ಡಿ, ಎಂ ಟಿ ಕೃಷ್ಣಪ್ಪ, ಎ.ಮಂಜು, ನೇಮಿರಾಜ್ ನಾಯಕ್, ಕೆ.ಎ.ತಿಪ್ಪೇಸ್ವಾಮಿ, ಸಮೃದ್ಧಿ ಮಂಜುನಾಥ್, ಕರೆಮ್ಮ ನಾಯಕ್, ಜೆಡಿಎಸ್ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕರಾದ ವೈ ಎಸ್ ವಿ ದತ್ತಾ, ದೊಡ್ಡಪ್ಪ ಗೌಡ ಪಾಟೀಲ್, ಕೆ.ಎಂ.ಕೃಷ್ಣಾರೆಡ್ಡಿ, ನಗರ ಡಾ.ಶ್ರೀನಿವಾಸಮೂರ್ತಿ, ಮಲ್ಲಿಕಾರ್ಜುನ ಖೂಬಾ, ತಿಮ್ಮರಾಯಪ್ಪ, ಕೆ.ಪಿ.ಬಚ್ಚೇಗೌಡ, ಡಾ.ಕೆ.ಅನ್ನದಾನಿ, ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಶಿವಶಂಕರ್ ಮುಂತಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ