Latest

ಮಾಜಿ ಶಾಸಕ ಜಿ.ವಿ.ಮಂಟೂರ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಮಾಜಿ ಶಾಸಕ ಜಿ.ವಿ.ಮಂಟೂರ ಬಾಗಲಕೋಟೆ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಂಟೂರ ಅವರು ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಮಂಟೂರ ಅವರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಜಿ.ವಿ.ಮಂಟೂರ ಎರಡು ಬಾರಿ ಬಾಗಲಕೋಟೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಹಾಗೂ 1985ರಲ್ಲಿ ಜನತಾ ಪಕ್ಷದಿಂದ ಗೆಲುವು ಸಾಧಿಸಿದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಕಟ್ಟಾ ಅನುಯಾಯಿ ಆಗಿದ್ದ ಮಂಟೂರ, 1985ರಲ್ಲಿ ಹೆಗಡೆ ಅವರು ರಾಜೀನಾಮೆ ಕೊಡಬಾರದು ಎಂದು ಪಟ್ಟು ಹಿಡಿದಿದ್ದರು.

ಬಾಗಲಕೋಟೆ ಜಿಲ್ಲೆಯಲ್ಲಿ ಮುಳುಗಡೆ ಕ್ಷೇತ್ರಗಳ ಬಗ್ಗೆಯೂ ಗಮನ ಸೆಳೆದಿದ್ದ ಮಂಟೂರ ಬಿಟಿಡಿಎ ಸ್ಥಾಪನೆಗೆ ಕಾರಣರಾಗಿದ್ದರು.
ಇಂಡಿಯನ್ ಕೋಸ್ಟ್ ಗಾರ್ಡ್ ನಲ್ಲಿ ಉದ್ಯೋಗಾವಕಾಶ; ಅರ್ಜಿ ಆಹ್ವಾನ

Home add -Advt

Related Articles

Back to top button