ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಕರ್ನಾಟಕದ ಉತ್ತರ ಭಾಗದ 14 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತಗಟ್ಟೆಗಳತ್ತ ಧಾವಿಸಿ ಬಂದು ಮತದಾರರು ವೋಟ್ ಹಾಕುತ್ತಿದ್ದಾರೆ.
ರಾಜ್ಯದ ಯಾವ ಯಾವ ಕ್ಷೇತ್ರಗಳಲ್ಲಿ ಮತದಾನ?
ಬಾಗಲಕೋಟೆ
ಬೆಳಗಾವಿ
ಬಳ್ಳಾರಿ
ಬೀದರ್
ವಿಜಯಪುರ
ಚಿಕ್ಕೋಡಿ
ದಾವಣಗೆರೆ
ಧಾರವಾಡ
ಹಾವೇರಿ
ಕೊಪ್ಪಳ
ಗುಲ್ಬರ್ಗ
ರಾಯಚೂರು
ಶಿವಮೊಗ್ಗ
ಉತ್ತರ ಕನ್ನಡ – ಈ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಇಂದು ಒಟ್ಟು 11 ರಾಜ್ಯಗಳ 92 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ದೇಶದಲ್ಲಿ 3ನೇ ಹಂತದಲ್ಲಿ ಹಾಗೂ ಕರ್ನಾಟಕದಲ್ಲಿ 2ನ್ ಹಂತದ ಚುನಾವಣೆ ನಡೆಯುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ