
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ರಂಭಾಪುರಿ ಜಗದ್ಗುರುಗಳು ಮತದಾನ ಮಾಡಿದರು.
ಬಾಳೆಹೊನ್ನೂರಿನ ಶ್ರೀರಂಭಾಪುರಿ ಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಂಭಾಪುರಿ ಶ್ರೀ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಹಕ್ಕು ಚಲಾಯಿಸಿದರು.

ಮತದಾನದ ಬಳಿಕ ಮಾತನಾಡಿದ ಶ್ರೀಗಳು ಪ್ರಜಾಪ್ರಭುತ್ವದ ಯಶಸ್ವಿಗಾಗಿ ಪ್ರತಿಯೊಬ್ಬರೂ ಮತದಾನ ಮಾಡಿ. ಮತದಾನ ಸಂವಿಧಾನ ನೀಡಿರುವ ಉನ್ನತ ಹಕ್ಕು. ಸುಭದ್ರ ಹಾಗೂ ಸದೃಢ ಸರ್ಕಾರ ನಿರ್ಮಾಣಕ್ಕಾಗಿ ಮತದಾನ ಮಾಡಬೇಕು ಎಂದು ಕರೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ