Belagavi NewsBelgaum NewsElection News

*ಬೆಳಗಾವಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಲೋಕಸಭಾ ಚುನವಣೆಯ 2ನೇ ಹಂತದ ಮತದಾನ ಚುರುಕುಗೊಂಡಿದೆ. ಮತದಾರರು ಬೆಳಿಗ್ಗೆಯಿಂದಲೇ ಉತ್ಸಾಹದಲ್ಲಿ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಬೆಳಗಾವಿಯ ವಿಜಯನಗರ ಮತಗಟ್ಟೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದರು.

ಮತಗಟ್ಟೆ ಸಂಖ್ಯೆ 61ರಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪುತ್ರ ಕಾಂಗ್ರೆಸ್ ಅಭ್ಯರ್ಥಿ ಮೃಣಾಳ್ ಹೆಬ್ಬಳ್ಕರ್, ಸಹೋದರ ಚೆನ್ನರಾಜ ಹಟ್ಟಿಹೊಳಿ ಹಾಗೂ ಕುಟುಂಬದವರು ತಮ್ಮ ಹಕ್ಕು ಚಲಾಯಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button