Belagavi NewsBelgaum News

*ಸವದತ್ತಿ ಯಲ್ಲಮ್ಮ ದೇವಿ ದರ್ಶನಕ್ಕೆ ನಾಳೆ ನಿರ್ಬಂಧ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 7ರಂದು ನಾಳೆ ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಸಿದ್ಧ ಯಾತ್ರಾ ಸ್ಥಳ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮ ದೇವಿ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.

ಪ್ರತಿ ಮಂಗಳವಾರ ಲಕ್ಷಾಂತರ ಜನ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ನಾಳೆ ಲೋಕಸಭಾ ಚುನಾವಣೆ ಮತದಾನವಿರುವುದರಿಂದ ಮತದಾನ ಬಿಟ್ಟು ಭಕ್ತರು ದೇಗುಲಕ್ಕೆ ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಳೆ (ಮೇ 7ರಂದು) ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದೆ.


Related Articles

Back to top button