National

*ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಾರಾಣಸಿ ಲೋಕಸಭಾ ಅಖಾಡದಿಂದ 3ನೇ ಬಾರಿ ಕಣಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.

ವಾರಾಣಸಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ನಾಮಪಪತ್ರ ಸಲ್ಲಿಸಿದರು. ಈ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ನಿನ್ನೆಯೇ ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಕ್ಷೇತ್ರಕ್ಕೆ ಆಗಮಿಸಿದ್ದು, ಭರ್ಜರಿ ರೋಡ್ ಶೋ ನಡೆಸಿದರು. ಬಳಿಕ ಕಾಶಿ ವಿಶ್ವನಾಥ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದರು.

Home add -Advt

ಇಂದು ವಾರಾಣಸಿಯ ದಶಾಶ್ವಮೇಧ ಘಾಟ್ ನಲ್ಲಿ ಗಂಗಾ ಸ್ನಾನ ಮಾಡಿ, ಗಂಗಾಪೂಜೆ, ಗಂಗಾರತಿ ನೆರವೇರಿಸಿದರು. ಬಳಿಕ ಕಾಲ ಭೈರವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button