
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದೀಗ ರಾಯ್ ಬರೇಲಿ ಕ್ಷೇತ್ರದಿಂದಲೂ ಕಣಕ್ಕಿಳಿದಿದ್ದಾರೆ.
ಎಐಸಿಸಿ ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದು, ರಾಯ್ ಬರೇಲಿಂದ ರಾಹುಲ್ ಗಾಂಧಿ ಹಾಗೂ ಅಮೇಥಿ ಕ್ಷೇತ್ರದಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಿದೆ.
ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂದ ಇಂದು ಬೆಳಿಗ್ಗೆ 11 ಗಂಟೆಗೆ ರಾಹುಲ್ ಗಾಂಧಿ ನಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಯ್ ಬರೇಲಿ ಕ್ಷೇತ್ರಕೆ ಮೇ 20ರಂದು ಮತದಾನ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ