Kannada NewsLatestNationalPolitics

*ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್: ಮುಖ್ಯ ಚುನಾವಣಾ ಆಯುಕ್ತರ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ, ಪಾರದರ್ಶಕ ಮತದಾನಕ್ಕೆ ಚುನವಣಾ ಆಯೋಗ ಸಿದ್ಧತೆ ನಡೆಸಿದೆ. ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ.

ಶಾಂತಿಯುತ ಮತದಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಕ್ರಿಮಿನಲ್ ಹಿನ್ನೆಲೆ ಇರುವ ವ್ಯಕ್ತಿಗಳು ಇದ್ದರೆ ಮಾಹಿತಿ ನೀಡಬೇಕು. ಸ್ಥಳೀಯ ಪತ್ರಿಕೆಗಳು, ಟಿವಿಗಳಲ್ಲಿ ಮಾಹಿತಿ ನೀಡಬೇಕು. ಈಗಾಗಲೇ 11 ರಾಜ್ಯಗಳ ಚುನವಣೆಯಲ್ಲಿ 3400 ಕೋಟಿ ರೂ ಸೀಜ್ ಮಾಡಲಾಗಿದೆ. ಮತಗಟ್ಟೆಯಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button