
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ೮ ವಿಧಾನ ಸಭಾ ಮತ ಕ್ಷೇತ್ರಗಳ೧೮೯೬ ಮತಗಟ್ಟೆಗಳ ಪೈಕಿ ೬೪ ಮತಗಟ್ಟೆಗಳು ಈ ಬಾರಿ ನಾನಾ ರೀತಿಯಲ್ಲಿ ಕಂಗೊಳಿಸಲಿವೆ.
ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ೪೦ ಸಖಿ, ೮ ವಿಶೇಷಚೇತನರ ಮತಗಟ್ಟೆ, ೮ ಯುವ ಮತಗಟ್ಟೆ ಮತ್ತು ೮ ಮಾದರಿ ಮತಗಟ್ಟೆಗಳನ್ನು ರೂಪಿಸಲಾಗಿದೆ.

ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳಾದ ರಾಹುಲ ಶಿಂಧೆ ಅವರು ಸೋಮವಾರ (ಮೇ.೬) ರಂದು ಅಥಣಿ ವಿಧಾನ ಸಭಾ ಮತಕ್ಷೇತ್ರದ ಸಂಕೊನಟ್ಟಿಯಲ್ಲಿ ಸ್ಥಾಪಿಸಲಾಗಿರುವ ಸಖಿ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ