GIT add 2024-1
Kore@40
Beereshwara 33

*ಲೋಕಸಭಾ ಚುನಾವಣೆ: ಮೊದಲ ಹಂತದ ಮತದಾನ ಮುಕ್ತಾಯ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ರಾಜ್ಯದ 14 ಕ್ಷೇತ್ರಗಳಲ್ಲಿ ನಡೆದ ಮೊದಲ ಹಂತದ ಮತದಾನ ಅವಧಿ ಮುಕ್ತಾಯವಾಗಿದೆ. ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಿದೆ.

ಬೆಳಿಗ್ಗೆ 7 ಗಂಟೆಯಿಂದ ನಡೆದ ಮತದಾನ ಸಂಜೆ 6 ಗಂಟೆಯವರೆಗೆ ನಡೆದಿದ್ದು, 6 ಗಂಟೆ ಬಳಿಕ ಕ್ಯೂನಲ್ಲಿ ಇದ್ದವರಿಗಷ್ಟೇ ಮತದಾನಕ್ಕೆ ಅವಕಾಶ ನೀಡಲಾಯಿತು.

Emergency Service

ಸದ್ಯದ ಮಾಹಿತಿ ಪ್ರಕಾರ ಸಂಜೆ 5 ಗಂಟೆಯವರೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಶೇ.63.90ರಷ್ಟು ಮತದಾನವಾಗಿದೆ. ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ.48.61ರಷ್ಟು ಮತದಾನವಾಗಿದೆ.

ಇಂದು ರಾಜ್ಯದ ಬೆಂಗಳೂರು ಸೆಂಟ್ರಲ್ , ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಮತದಾನ ನಡೆಯಿತು.


Laxmi Tai add
Bottom Add3
Bottom Ad 2