ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣ ಸಂಸತ್ ಉಭಯ ಸದನಗಳಲ್ಲಿ ಪ್ರತಿಧ್ವನಿಸಿದ್ದು, ಅಶಿಸ್ತು ತೋರಿದ ಆರೋಪದಲ್ಲಿ ವಿಪಕ್ಷಗಳ ಸಂಸದರನ್ನು ಅಮಾನತು ಮಾಡಿರುವ ಘಟನೆ ನಡೆದಿದೆ.
ಇಂದು ಬೆಳಿಗ್ಗೆ ಲೋಕಸಭೆ ಕಲಾಪ ಅರಂಭವಾದಾಗಿನಿಂದ ವಿಪಕ್ಷ ಸದಸ್ಯರು ಸಂಸತ್ ನಲ್ಲಿ ನಡೆದ ಭಾರಿ ಭದ್ರತಾ ಲೋಪ ಪ್ರಕರಣವನ್ನು ಖಂಡಿಸಿ ಕೇಂದ್ರ ಸರ್ಕರದ ವಿರುದ್ಧ ಪ್ರತಿಭಟನೆ ನಡೆಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ಉತ್ತರ ನೀಡಲಿ ಎಂದು ಪಟ್ಟು ಹಿಡಿದರು. ಕಲಾಪಕ್ಕೆ ಅಡ್ಡಿಪಡಿಸಿ ಅಶಿಸ್ತು ತೋರಿದ ಆರೋಪದಲ್ಲಿ ಲೋಕಸಭೆಯ 33 ಸಂಸದರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಯಿತು.
ಇದೇ ವೇಳೆ ರಾಜ್ಯಸಭೆ ಕಲಾಪದಲ್ಲಿಯೂ ವಿಪಕ್ಷ ಸದಸ್ಯರು ಭದ್ರತಾ ಲೋಪ ಪ್ರಶ್ನಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ವಿಪಕ್ಷಗಳ ಗಲಾಟೆ ಹೆಚ್ಚುತ್ತಿದ್ದಂತೆ ಕಾಂಗ್ರೆಸ್ ಸಂಸದರಾದ ಜೈರಾಮ್ ರಮೇಶ್, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ 34 ಸಂಸದರನ್ನು ಸಂಸತ್ ಚಳಿಗಾಲದ ಅಧಿವೇಶನದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ