Latest

*ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದಕ್ಕೆ ಬಾರ್‌ಗೆ ಬೆಂಕಿ ಹಚ್ಚಿಸಿದ ಇನ್ಸ್‌ಪೆಕ್ಟರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು : ಲೋಕಾಯುಕ್ತಕ್ಕೆ ದೂರು ನೀಡಿದ ಕಾರಣಕ್ಕೆ ಅಬಕಾರಿ ಇನ್ಸ್‌ಪೆಕ್ಟರ್ ಓರ್ವರು ಬಾರ್ ಅಂಡ್ ರೆಸ್ಟೊರೆಂಟ್ ಗೆ ಬೆಂಕಿ ಹಚ್ಚಿಸಿರುವ ಘಟನೆ ಬೆಂಗಳೂರು ನಗರದ ಸುಂಕದಕಟ್ಟೆಯಲ್ಲಿ ನಡೆದಿದೆ.

ಅಬಕಾರಿ ಇನ್ಸ್‌ಪೆಕ್ಟರ್ ಮಂಜುನಾಥ ಬಾರ್ ಆಂಡ್ ರೆಸ್ಟೋರೆಂಟ್ ಗೆ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ರೆಸ್ಟೋರೆಂಟ್ ಮಾಲೀಕರು ಇನ್ಸ್‌ಪೆಕ್ಟರ್ ವಿರುದ್ದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆರಂಭದಲ್ಲಿ ಬೆಂಕಿ ಅವಘಡ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಎನ್ನಲಾಗಿತ್ತು. ಆದರೆ, ಬೆಸ್ಕಾಂ ಅಧಿಕಾರಿಗಳು ಶಾರ್ಟ್ ಸರ್ಕ್ಯೂಟ್ ನಿಂದ ಅಪಘಾತ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.

ಮಾಚೋಹಳ್ಳಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಗೆ ರಾಮಕೃಷ್ಣ ಎಂಬುವವರು ಲೈಸೆನ್ಸ್ ಗೆ ಅರ್ಜಿ ಸಲ್ಲಿಸಿದ್ದರು. ಅಬಕಾರಿ ಇನ್ಸ್‌ಪೆಕ್ಟರ್ ಮಂಜುನಾಥ್ 15 ಲಕ್ಷ ಬೇಡಿಕೆ ಇಟ್ಟಿದ್ದರು. ಬಾರ್ ಮಾಲೀಕ ರಾಮಕೃಷ್ಣ ಹಣ ಹೊಂದಿಸಿ 10 ಲಕ್ಷ ಕೊಟ್ಟಿದ್ದರು. ಉಳಿದ ಐದು ಲಕ್ಷಕ್ಕಾಗಿ ಒತ್ತಾಯಿಸಿದ್ದರು. ಇದರಿಂದ ಬೇಸತ್ತ ರಾಮಕೃಷ್ಣ ಇನ್ಸ್‌ಪೆಕ್ಟರ್ ವಿರುದ್ಧ ದೂರು ನೀಡಿದ್ದರು. ಇದೇ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ಮಂಜುನಾಥ್ ಬಂಧನಕ್ಕೊಳಗಾಗಿದ್ದರು. ಇದಕ್ಕೆ ಸೇಡು ತೀರಿಸಿಕೊಳ್ಳಲು ರಾಮಕೃಷ್ಣ ಅವರ ಮಾಲೀಕತ್ವದ ಬಾರ್ ಗೆ ಬೆಂಕಿ ಇರಿಸಿದ್ದಾರೆ ಎಂದು ಆರೋಪಿಸಲಾಗಿದೆ.

*ಕಾಲೇಜಿನಲ್ಲಿಯೇ ವಿದ್ಯಾರ್ಥಿಯಿಂದ ವಿದ್ಯಾರ್ಥಿನಿಯ ಬರ್ಬರ ಹತ್ಯೆ*

https://pragati.taskdun.com/college-studentmurderloverbangalore/

ವಿಶೇಷ ಚೇತನ ಪುತ್ರ ಪ್ರೇರಣಾ ಶಕ್ತಿ: ಶಶಿಕಲಾ ಜೊಲ್ಲೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button