
ಪ್ರಗತಿವಾಹಿನಿ ಸುದ್ದಿ: ಲೋಕಯುಕ್ತ ಡಿವೈಎಸ್ ಪಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ಬೆದರಿಕೆಯೊಡ್ಡಿ, ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮುರುಗೆಪ್ಪ ಬಂಧಿತ ಆರೋಪಿ. ರಿಸರ್ವ್ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದ ಮುರುಗೆಪ್ಪ ಕೆಲಸದಿಂದ ವಜಾಗೊಂಡಿದ್ದರು. ಹಲವು ಬಾರಿ ಜೈಲಿಗೆ ಹೋಗಿದ್ದರೂ ಮತ್ತೆ ಅಪರಾಧ ಕೃತ್ಯಗಳಲ್ಲೇ ಭಾಗಿಯಾಗಿ ಹಳೆ ಚಳಿ ಮುಂದುವರೆಸಿದ್ದ.
ತಾನು ಲೋಕಾಯುಕ್ತ ಡಿವೈ ಎಸ್ ಪಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ಕರೆ ಮಾಡುತ್ತಿದ್ದ ಮುರುಗೆಪ್ಪ, ನಿಮ್ಮ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿದೆ. ದಾಳಿ ಮಾಡಬಾರದು, ಪ್ರಕರಣ ಮುಚ್ಚಿ ಹಾಕಬೇಕು ಎಂದರೆ ಹಣ ನೀಡಬೇಕು ಎಂದು ಅಧಿಕಾರಿಗಳಿಗೆ ಹಣಕ್ಕೆ ಬೇಡಿಕೆ ಇಡುತ್ತಿದ್ದ.
ಲೋಕಾಯುಕ್ತ ಡಿವೈ ಎಸ್ ಪಿ ಬಸವರಾಜು ಆರ್.ಮುರುಗನ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಮುರುಗೆಪ್ಪ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ