Belagavi NewsBelgaum NewsKannada NewsKarnataka News

ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತಿತರ ಸುದ್ದಿಗಳು

ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸಂವಿಧಾನದ ಮೌಲ್ಯ ಹಾಗೂ ಅದರ ಆಶಯಗಳನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬೆಳಗಾವಿಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫೆ. ೫ ಮತ್ತು ೬ ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗಣ ರಾಜ್ಯೋತ್ಸವದ ದಿನದಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಸ್ಥಬ್ದ ಚಿತ್ರದ ಮೆರವಣಿಗೆಗೆ ಚಾಲನೆ ನೀಡಿದರು.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸ್ಥಬ್ದ ಚಿತ್ರಗಳನ್ನು ಒಳಗೊಂಡ ವಿಶೇಷ ರಥವನ್ನು ಏಕ ಕಾಲಕ್ಕೆ ಎರಡು ಮಾರ್ಗದಲ್ಲಿ ಸಂಚರಿಸುವದರ ಮೂಲಕ ಸಂವಿಧಾನ ಜಾಗೃತಿ ಜಾಥವನ್ನು ಯಸಶ್ವಿಗೊಳ್ಳಿಸಿದರು. ಮೊದಲ ಮಾರ್ಗದ ರಥ ಬೆಳಗಾವಿ, ಹುಕ್ಕೇರಿ, ನಿಪ್ಪಾಣಿ, ಚಿಕ್ಕೋಡಿ, ಕಾಗವಾಡ, ಅಥಣಿ, ರಾಯಬಾಗ ತಾಲೂಕುಗಳಲ್ಲಿ ಸಂಚರಿಸಿತು. ಎರಡನೇ ಮಾರ್ಗದ ರಥ ಬೆಳಗಾವಿ, ಗೋಕಾಕ, ಮೂಡಲಗಿ, ರಾಮದುರ್ಗ, ಸವದತ್ತಿ, ಬೈಲಹೊಂಗಲ, ಚನ್ನಮ್ಮನ ಕಿತ್ತೂರ, ಖಾನಾಪೂರ ತಾಲೂಕು ಮಾರ್ಗಗಳಲ್ಲಿ ಸಂಚರಿಸಿತು.
ಫೆ. ೫ ರಂದು ಮೊದಲ ಮಾರ್ಗದ ರಥವು ಹುಕ್ಕೇರಿ ತಾಲೂಕಿನ ನಿಡಸೋಸಿ, ಅಂಕಲಗಿ, ಸೊಲ್ಲಾಪೂರ, ಹರಗಾಪೂರ, ಬೋರಗಲ್, ಕೇಸ್ತಿ, ಬಾಡ, ಕೊನಕೇರಿ, ಬಾಲೂರ, ಮತ್ತಿವಾಡೆ ಮತ್ತು ಹಿಟ್ಟಣಿಗ್ರಾಮ ಪಂಚಾಯತಿ ಮೂಲಕ ಸಂಚರಿಸಿತು.
ಈ ಜಾಥಾದಲ್ಲಿ ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು, ಸ್ವ-ಸಹಾಯ ಸಂಘಗಳ ಪ್ರತಿನಿಧಿಗಳು, ಜನಪ್ರತಿನಿಧಿಗಳು, ವಿದ್ಯಾರ್ಥಿಗಳು ಭಾಗವಹಿಸಿ ಸಂವಿಧಾನ ಜಾಗೃತಿಯನ್ನು ಯಶಸ್ವಿಗೊಳಿಸಿದರು.



ಲೋಕಾಯುಕ್ತ ಜನ ಸಂಪರ್ಕ ಸಭೆ ಫೆ.೧೪ ರಂದು

ಜಿಲ್ಲೆಯ ಮೂಡಲಗಿ ತಾಲೂಕಿನ ತಹಶೀಲ್ದಾರ ಕಛೇರಿ ಸಭಾಭವನದಲ್ಲಿ ಫೆ.೧೪ ರಂದು ಬೆಳಗ್ಗೆ ೧೧ ಗಂಟೆಯಿಂದ ೨ ಗಂಟೆಯವರೆಗೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಮೂಡಲಗಿ ತಾಲೂಕಿನ ಎಲ್ಲ ತಾಲೂಕಾ ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಸಲಿದ್ದಾರೆ.
ಸರ್ಕಾರಿ ಕಛೇರಿಯ ಅಧಿಕಾರಿಗಳು ಸಾರ್ವಜನಿಕರ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದಲ್ಲಿ, ಸ್ಥಳದಲ್ಲಿಯೇ ಅಧಿಕಾರಿಗಳಿಂದ ಪರಿಹರಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಇಚ್ಛಿಸುವವರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಹಾಜರಿರಲು ತಿಳಿಸಲಾಗಿದೆ.
ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡುವಲ್ಲಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ, ಒತ್ತಾಯಿಸಿದಲ್ಲಿ ಅಥವಾ ಸರ್ಕಾರಿ ಅಧಿಕಾರಿಯ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಮಾಹಿತಿ ಇದ್ದಲ್ಲಿ, ಲೋಕಾಯುಕ್ತ ಅಧಿಕಾರಿಗಳೊಂದಿಗೆ ನೇರವಾಗಿ/ಗುಪ್ತವಾಗಿ ಮಾಹಿತಿ ನೀಡಿ, ಸದರಿ ಸಭೆಯ ಸದುಪಯೋಗ ಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ೦೮೩೧-೨೯೫೦೭೫೬ ಅಥವಾ ೦೮೩೧-೨೪೨೧೯೨೨ ಸಂಖ್ಯೆಗೆ ಸಂರ್ಪಕಿಸಬಹುದು ಎಂದು ಬೆಳಗಾವಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಫೆ.೫ ರಿಂದ ೧೦ ವರೆಗೆ ಗಣಕಯಂತ್ರ ಥೆಯರಿ ಮತ್ತು ಪ್ರಯೋಗಿಕ ಪರೀಕ್ಷೆ

ಬೆಳಗಾವಿಯ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಮತ್ತು ಎಸ್.ಎನ್ ಪದವಿ ಪೂರ್ವ ಕಾಲೇಜು ಪರಿಕ್ಷಾ ಕೇಂದ್ರಗಳಲ್ಲಿ ಫೆ.೫ ರಿಂದ ೧೦ವರೆಗೆ ಗಣಕಯಂತ್ರ ಥೆಯರಿ ಮತ್ತು ಪ್ರಯೋಗಿಕ ಪರೀಕ್ಷೆಗಳನ್ನು ನಡೆಯಲ್ಲಿವೆ. ಪರೀಕ್ಷೆ ನಡೆಯಲಿರುವ ದಿವಸಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇದಾಜ್ಞೆ ಜಾರಿಗೋಳಿಸಿ ನಗರ ಪೊಲೀಸ್ ಆಯುಕ್ತರು ಆದೇಶವನ್ನು ಹೋರಡಿಸಿದ್ದಾರೆ.
ಪರೀಕ್ಷೆಗಳನ್ನು ನಿಷ್ಟಕ್ಷಪಾತವಾಗಿ ಹಾಗೂ ಯಾವುದೇ ತೊಂದರೆ ಬಾರದಂತೆ ಪರೀಕ್ಷೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಲು ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ನಿರ್ಬಂಧಿಸಲಾಗಿದೆ.
ಶಾಲಾ-ಕಾಲೇಜಿನ ಸಿಬ್ಬಂದಿ, ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಹೊರತು ಪಡಿಸಿ ಸಾರ್ವಜನಿಕರನ್ನು ನಿಷೇದಿಸಲಾಗಿದೆ. ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ತಿರುಗಾಡುವುದು, ಪರೀಕ್ಷಾ ಕೇಂದ್ರದ ಸುತ್ತಲೂ ಇರುವ ಸೈಬರ್ ಕೆಫೆ, ಝೆರಾಕ್ಸ್ ಅಂಗಡಿ ಹಾಗೂ ಇನ್ನಿತರ ಅಂತರ್ಜಾಲ ಕೆಂದ್ರಗಳನ್ನು ಕಾಲಕ್ಕೆ ಕಡ್ಡಾಯವಾಗಿ ಮುಚ್ಚಲು ಆದೇಶಿಸಲಾಗಿದೆ
ಸದರಿ ಆದೇಶ ಉಲ್ಲಂಘಿಸಿದವರ ವಿರುಧ್ದ ಕಲಂ ೧೮೮ ಭಾರತೀಯ ದಂಡ ಸಂಹಿತೆ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿಯ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರಾದ ಎಸ್. ಎನ್. ಸಿದ್ದರಾಮಪ್ಪಾ ಅವರು ಪ್ರಕಟಣೆಯಲ್ಲಿ ತಿಳಿಸಿದರು.



ಪಿಡಿಓಗಳ ಕುಂದುಕೊರತೆ ಆಲಿಸಿದ ಜಿಪಂ ಸಿಇಓ

ಜಿಪಂ ಸಿಇಓ ರಾಹುಲ್ ಶಿಂಧೆ ಅವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ (ಫೆ.೬) ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಪದಾಧಿಕಾರಿಗಳ ಕುಂದುಕೊರತೆ ಕುರಿತು ಆಲಿಸಿದರು.
ಜಿಲ್ಲಾ ಮತ್ತು ತಾಲೂಕು ಮಟ್ಟದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳಿಂದ ಸೇವಾ ವಿ?ಯ, ಇಲಾಖಾ ವಿಚಾರಣೆ, ಯೋಜನೆಗಳ ಅನು?ನ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಸಮಸ್ಯೆಗಳ ಕುರಿತು ಆಲಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು, ಸಮಸ್ಯೆಗಳಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪಿಡಿಒ ಸಂಘದ ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು, ತಾಲ್ಲೂಕಾ ಮಟ್ಟದ ಅಧ್ಯಕ್ಷರು, ಉಪಾಧ್ಯಕ್ಷರು, ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button