
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕು ಪಂಚಾಯಿತಿ ಕಾರ್ಯಾಲಯದ ಸಭಾ ಭವನದಲ್ಲಿ ಜೂನ್ 14 ರಂದು ಬೆಳಗ್ಗೆ 11 ರಿಂದ 2 ಗಂಟೆಯವರೆಗೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು, ಅಥಣಿ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳ ಸಮಕ್ಷಮದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ.
ಸರ್ಕಾರಿ ಕಚೇರಿಯ ಅಧಿಕಾರಿಗಳು ಸಾರ್ವಜನಿಕರ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದಲ್ಲಿ, ಸ್ಥಳದಲ್ಲಿಯೇ ಅಧಿಕಾರಿಗಳಿಂದ ಪರಿಹರಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಇಚ್ಛಿಸುವವರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಹಾಜರಿರಬೇಕು.
ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡುವಲ್ಲಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ/ಒತ್ತಾಯಿಸಿದಲ್ಲಿ ಅಥವಾ ಸರ್ಕಾರಿ ಅಧಿಕಾರಿಯ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಮಾಹಿತಿ ಇದ್ದಲ್ಲಿ, ಲೋಕಾಯುಕ್ತ ಅಧಿಕಾರಿಗಳೊಂದಿಗೆ ನೇರವಾಗಿ/ಗುಪ್ತವಾಗಿ ಮಾಹಿತಿ ನೀಡಿ, ಸಭೆಯ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ವಿವರಗಳಿಗಾಗಿ ಕಚೇರಿ ದೂರವಾಣಿ ಸಂಖ್ಯೆ 0831-2950756, 0831-2421922,ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ