Wanted Tailor2
Cancer Hospital 2
Bottom Add. 3

ಲೋಕಾಯುಕ್ತ ಜನ ಸಂಪರ್ಕ ಸಭೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಶಹರದ ಇಂದಿರಾ ನಗರದಲ್ಲಿರುವ ಲೋಕೋಪಯೋಗಿ ಇಲಾಖೆಯ ಸಮುದಾಯ ಭವನದಲ್ಲಿ ಅ.೧೩ ೨೦೨೩ ರಂದು ಬೆಳ್ಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧:೩೦ ಗಂಟೆಯವರೆಗೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಚಿಕ್ಕೋಡಿ ತಾಲೂಕಾ ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ನಡೆಸಲ್ಲಿದಾರೆ.

ಸರ್ಕಾರಿ ಕಛೇರಿಯಲ್ಲಿಯ ಅಧಿಕಾರಿಗಳು ಸಾರ್ವಜನಿಕರ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದಲ್ಲಿ, ಸ್ಥಳದಲ್ಲಿಯೇ ಅಧಿಕಾರಿಗಳಿಂದ ಪರಿಹರಿಸಿಕೊಳ್ಳಬಹುದು.
ಅರ್ಜಿ ಸಲ್ಲಿಸಲು ಇಚ್ಛಿಸುವವರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಹಾಜರಿರಲು ಈ ಮೂಲಕ ತಿಳಿಸಲಾಗಿದೆ.
ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡುವಲ್ಲಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ ಒತ್ತಾಯಿಸಿದಲ್ಲಿ ಅಥವಾ ಸರ್ಕಾರಿ ಅಧಿಕಾರಿಯ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಮಾಹಿತಿ ಇದ್ದಲ್ಲಿ, ಲೋಕಾಯುಕ್ತ ಅಧಿಕಾರಿಗಳೊಂದಿಗೆ ನೇರವಾಗಿ ಗುಪ್ತವಾಗಿ ಮಾಹಿತಿ ನೀಡಿ, ಸದರಿ ಸಭೆಯ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಈ ಕಛೇರಿ ದೂರವಾಣಿ ಸಂಖ್ಯೆ ೦೮೩೧-೨೯೫೦೭೫೬ ಅಥವಾ ೦೮೩೧-೨೪೨೧೯೨೨, ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Bottom Add3
Bottom Ad 2

You cannot copy content of this page